ಬೆಂಗಳೂರು: ನ್ಯಾ. ವಿಭು ಭಕ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಮೊದಲಾದವರು ಉಪಸ್ಥಿತರಿದ್ದರು.
























