ಡಿ ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ

ಸಾಧನಾ ಸಮಾವೇಶದಿಂದ ಮರಳುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದ ವಾಹನ

ಮೈಸೂರು: ನಗರದಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇ‌ನಲ್ಲಿ ಈ ಘಟನೆ ಸಂಭವಿಸಿದೆ. ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಸಮೀಪದ ಎಕ್ಸ್‌ಪ್ರೆಸ್ ವೇ ನಲ್ಲಿ ಈ ದುರಂತ ಸಂಭವಿಸಿದೆ.





















































 
 

ಡಿವೈಡರ್‌ಗೆ ‌ಢಿಕ್ಕಿಯಾದ ಪರಿಣಾಮ ಆ ಅಪಘಾತ ನಡೆದಿದೆ. ಈ ವಾಹನದ ಹಿಂದಿದ್ದ ಡಿಕೆಶಿ ಅವರ ಕಾರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

error: Content is protected !!
Scroll to Top