ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು

ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ, ಶಿಖರ್ ಧವನ್ ನಿರ್ಧಾರಕ್ಕೆ ಭಾರಿ ಮೆಚ್ಚುಗೆ

ಲಂಡನ್‌ : ಭಾರತದ ತಂಡದ ಐವರು ಪ್ರಮುಖ ಆಟಗಾರರು ಪಾಕಿಸ್ತಾನ ವಿರುದ್ಧ ಯಾವ ಕಾರಣಕ್ಕೂ ಆಡುವುದಿಲ್ಲ ಎಂಬ ಗಟ್ಟಿ ನಿರ್ಧಾರ ತಳೆದ ಪರಿಣಾಮಬಾಗಿ ಕ್ರಿಕೆಟ್‌ ಪಂದ್ಯವೇ ರದ್ದಾಗಿದೆ. ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಿಂದ ಭಾರತೀಯ ಆಟಗಾರರು ಹಿಂದೆ ಸರಿದ ಹಿನ್ನಲೆಯಲ್ಲಿ ಮ್ಯಾಚ್ ಕ್ಯಾನ್ಸಲ್ ಆಗಿದೆ.

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ ಹಾಗೂ ಶಿಖರ್ ಧವನ್ ತಿಳಿಸಿದ್ದರು. ಐವರು ಪ್ರಮುಖ ಆಟಗಾರರು ಪಂದ್ಯದಿಂದ ಹಿಂದೆ ಸರಿದ ಬೆನ್ನಲ್ಲೇ ಇತರೆ ಆಟಗಾರರು ಕೂಡ ಅಲಭ್ಯರಾಗುವ ಸೂಚನೆ ಲಭಿಸಿತ್ತು. ಇದರ ಬೆನ್ನಲ್ಲೇ ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿ ಆಯೋಜಕರು ಸೋಷಿಯಲ್ ಮೀಡಿಯಾದಲ್ಲಿ ಇಂದು ನಡೆಯಲಿರುವ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.





















































 
 

ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಲೀಗ್​​ನಲ್ಲಿ ನಾವು ಯಾವಾಗಲೂ ಕ್ರಿಕೆಟ್ ಅನ್ನು ಪ್ರೀತಿಸುತ್ತೇವೆ. ನಮ್ಮ ಏಕೈಕ ಗುರಿ ಅಭಿಮಾನಿಗಳಿಗೆ ಕೆಲವು ಒಳ್ಳೆಯ, ಸಂತೋಷದ ಕ್ಷಣಗಳನ್ನು ನೀಡುವುದಾಗಿದೆ. ಈ ವರ್ಷ ಪಾಕಿಸ್ತಾನ ಹಾಕಿ ತಂಡ ಭಾರತಕ್ಕೆ ಬರಲಿದೆ ಎಂಬ ಸುದ್ದಿಯನ್ನು ಕೇಳಿದ ನಂತರ, ಭಾರತ-ಪಾಕಿಸ್ತಾನ ನಡುವಣ ವಾಲಿಬಾಲ್ ಪಂದ್ಯವನ್ನು ನೋಡಿದ ಬಳಿಕ, WCL ನಲ್ಲಿ ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ಮುಂದುವರಿಸಲು ನಾವು ಯೋಚಿಸಿದ್ದೆವು. ಆದರೆ ಬಹುಶಃ ಈ ಪ್ರಕ್ರಿಯೆಯಲ್ಲಿ, ನಾವು ಅನೇಕರ ಭಾವನೆಗಳನ್ನು ನೋಯಿಸಿದ್ದೇವೆ ಮತ್ತು ಕೆಲವರ ಭಾವನೆಗಳನ್ನು ಕಲಕಿದ್ದೇವೆ. ಹೀಗಾಗಿ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ನಡುವಣ ಪಂದ್ಯವನ್ನು ಕ್ಯಾನ್ಸಲ್ ಮಾಡಲು ನಿರ್ಧರಿಸಿದ್ದೇವೆ ಎಂದು ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯ ಆಯೋಜಕರು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಕಳೆದ ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಅನೇಕರು ಪಾಕಿಸ್ತಾನ ವಿರುದ್ಧ ಭಾರತೀಯರು ಯಾವುದೇ ಪಂದ್ಯವಾಡಬಾರದು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು. ಅದರಲ್ಲೂ ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಕಣಕ್ಕಿಳಿಯಲು ಮುಂದಾಗಿರುವ ಇಂಡಿಯಾ ಚಾಂಪಿಯನ್ಸ್ ಆಟಗಾರರ ದೇಶಪ್ರೇಮವನ್ನು ಪ್ರಶ್ನಿಸಲಾಗಿತ್ತು.

ಈ ಬಗ್ಗೆ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸುರೇಶ್ ರೈನಾ, ಶಿಖರ್ ಧವನ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್ ಹಾಗೂ ಹರ್ಭಜನ್ ಸಿಂಗ್ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲು ನಿರಾಕರಿಸಿದ್ದರು. ಇದೀಗ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿರುವ ಆಟಗಾರರು ಕೂಡ ಪಾಕ್ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಪಾಕಿಸ್ತಾನ್ ಚಾಂಪಿಯನ್ಸ್ ಹಾಗೂ ಇಂಡಿಯಾ ಚಾಂಪಿಯನ್ಸ್ ನಡುವಣ ಮ್ಯಾಚ್​ ಅನ್ನು ಕ್ಯಾನ್ಸಲ್ ಮಾಡಲು ನಿರ್ಧರಿಸಿದ್ದಾರೆ.

error: Content is protected !!
Scroll to Top