ಯಕ್ಷರಂಗದ ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ: ತಾಲೂಕಿನ ಮಂಚಕಲ್ಲು ‌ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಇಂದು ಮದ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

ಹನುಮಗಿರಿ ಮೇಳದಲ್ಲಿ ಇತ್ತೀಚೆಗಿನ ವರೆಗೆ ಬಣ್ಣದ ವೇಷಧಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದ ಸದಾಶಿವ ಶೆಟ್ಟಿಗಾರರು, ಸುಮಾರು ಮೂರು ದಶಕಗಳಿಗೂ ಹೆಚ್ಚಿನ ಕಾಲ ಯಕ್ಷಗಾನ ರಂಗಕ್ಕೆ ಸೇವೆ ಸಲ್ಲಿಸಿದವರು.

ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಾಲಿಂಗ ಮೊದಲಾದ ದಿಗ್ಗಜರಲ್ಲಿ ಯಕ್ಷಗಾನ ನಾಟ್ಯಾಭ್ಯಾಸ ಮಾಡಿದವರು. ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೇಳಗಳಲ್ಲಿ ಸುಮಾರು 36 ವರ್ಷಗಳ ಕಾಲ ತಿರುಗಾಟ ನಡೆಸಿ ಯಕ್ಷಗಾನ ರಂಗದಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದವರು. ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ಸೇವಾ ನಿವೃತ್ತಿ ಘೋಷಿಸಿದ್ದರು‌.





















































 
 

ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ರೈ ಮತ್ತು ಪಿ.‌ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕಳೆದ ಹತ್ತು ದಿನಗಳ ಹಿಂದಷ್ಟೇ ಶ್ರೀಯುತರಿಗೆ ಯಕ್ಷಮಂಗಳ ಪುರಸ್ಕಾರ ಒಲಿದು ಬಂದಿತ್ತು. ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಮೊದಲಾದ ಪುರಸ್ಕಾರಗಳಿಗೂ ಇವರು ಭಾಜನರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

error: Content is protected !!
Scroll to Top