ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು

ಸಹಪಾಠಿಯ ಮನೆಗೆ ಹೋದ ವೇಳೆ ಸಂಭವಿಸಿದ ದುರಂತ

ಸುಳ್ಯ: ಸುಳ್ಯದ ಯುವಕ ಹದಿಹರೆಯದ ಯುವಕನೊಬ್ಬ ಕೇರಳದ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಈತ ಮಂಗಳೂರಿನಲ್ಲಿ ಕಲಿಯುತ್ತಿದ್ದರು.

ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ (19) ಮೃತಪಟ್ಟಿರುವ ದುರ್ದೈವಿ. ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.





















































 
 

ಆಸ್ತಿಕ್ ರಾಘವ್ ಮಂಗಳೂರಿನಿಂದ ತನ್ನ ಸಹಪಾಠಿಯೊಂದಿಗೆ ಕೇರಳದ ಕಣ್ಣೂರಿನಲ್ಲಿರುವ ಸಹಪಾಠಿ ಮನೆಗೆ ಭಾನುವಾರ ಬೆಳಗ್ಗೆ ಹೋಗಿದ್ದು, ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಆಸ್ತಿಕ್ ಕಾಲು ಜಾರಿ ನೀರಿಗೆ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

error: Content is protected !!
Scroll to Top