ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್ ಇನ್‍ ಸ್ಪೆಕ್ಟರ್ ರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು ಆತ್ಮಹತ್ಯೆ ಮಾಡಿಕೊಂಡವರು. ಅವರು ಶಿರಸಿ ಠಾಣೆಯಿಂದ ಸುಮಾರು 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಕುಟುಂಬ ಉತ್ತರ ಕನ್ನಡದಲ್ಲಿಯೇ ವಾಸವಿದ್ದು, ಕೀರಪ್ಪ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಶನಿವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಹಾಜರಾಗದೇ, ಫೋನ್ ಕರೆಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಕಾರಣದಂತೆ ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗೆ ಅನುಮಾನ ಉಂಟಾಗಿ, ಅವರು ವಾಸಿಸುತ್ತಿದ್ದ ಮನೆಗೆ ತೆರಳಿದ್ದರು. ಮನೆಯ ಬಾಗಿಲು ಲಾಕ್‌ನಲ್ಲಿದ್ದು, ಹೊರಗಿಂದ ಕರೆದಾಗ ಪ್ರತಿಕ್ರಿಯೆ ಬಂದಿಲ್ಲ. ಕಿಟಕಿಯಿಂದ ನೋಡಿದಾಗ ಅವರು ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದೆ.





















































 
 

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

error: Content is protected !!
Scroll to Top