ಓಲೈಕೆಗಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕೆ
ಬೆಂಗಳೂರು: ಮಂಜುನಾಥನ ಶಾಪದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಧರ್ಮಸ್ಥಳ ಪ್ರಕರಣಗಳ ಬೆಳವಣಿಗೆ ಹಿನ್ನೆಲೆಯಲ್ಲಿ ಭವಿಷ್ಯ ನುಡಿದಿದ್ದಾರೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ ರಚನೆ ಬಗ್ಗೆ ಪ್ರತಿಕ್ರಿಯಿಸಿ, ಇವತ್ತಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನುಜ ಅನುಸರಿಸುತ್ತಿದೆ. ಧರ್ಮಸ್ಥಳ ವಿಚಾರವನ್ನು ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂಥ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ಸಮುದಾಯವನ್ನು ಓಲೈಸುವ ಸಲುವಾಗಿ ವಿಶ್ವದೆಲ್ಲೆಡೆ ಹೆಸರುವಾಸಿಯಾದ ಮಂಜುನಾಥನ ಸನ್ನಿದಿಗೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ನಡೆಕೊಳ್ಳುತ್ತಿದ್ದಾರೆ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಸಂಪೂರ್ಣವಾಗಿ ಹಿಂದೂ ವಿರೋಧಿ ನಡೆ. ಮಂಜುನಾಥನ ಶಾಪದಿಂದ ಈ ಸರ್ಕಾರ ಸರ್ವನಾಶವಾಗತ್ತದೆ ಎಂದು ಕಿಡಿಕಾರಿದ್ದಾರೆ.
























