ಬೆಂಗಳೂರು: ಬಿಜೆಪಿಯವರು ಬೆಣ್ಣೆ ತಿಂದು ಕಾಂಗ್ರೆಸ್ ಮೂತಿಗೆ ಒರೆಸುವ ತಂತ್ರ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಸಣ್ಣ ವ್ಯಾಪಾರಿಗಳಿಗೆ GST ನೊಟೀಸ್ ಜಾರಿ ಮಾಡುವ ಮೂಲಕ ಬಿಜೆಪಿ ಬಡವರಿಗೆ ಕಿರುಕುಳ ನೀಡುತ್ತಿದೆ. ಈ ನೀತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ 2019 ರಲ್ಲೇ ವಹಿವಾಟು ಮಿತಿ ನಿಗದಿ ಮಾಡಿ ಇದನ್ನು ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚಿಸಿದೆ. ಸಣ್ಣ ವ್ಯಾಪಾರದ ಮೂಲಕ ಜೀವನ ಕಟ್ಟಿಕೊಂಡ 14 ಸಾವಿರ ವ್ಯಾಪಾರಿಗಳಿಗೆ ಈಗಾಗಲೇ ನೊಟೀಸ್ ನೀಡಲಾಗಿದೆ. ಈ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆದು ಜನತೆಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಅವರು ತಿಳಿಸಿದ್ದಾರೆ.
ಈ ವಿಷಯದಲ್ಲಿ ಜನರಿಗೆ ಹೇಗೆ ನೆರವಾಗುವುದು ಎಂಬುದಕ್ಕೆ ಸಂಬಂಧಿಸಿದ ಹಾಗೆ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
























