ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್‌ಗೆ ಪೂರ್ಣ ವಿಶ್ರಾಂತಿ

ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳೆಲ್ಲ ರದ್ದು

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲಿ ಅವರು ಮಂಗಳವಾರದಿಂದ ಮೂರು ದಿನ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.

ಇಂದಿನಿಂದ ಮೂರು ದಿನ ಅವರು ಯಾರನ್ನೂ ಭೇಟಿ ಆಗಲ್ಲ. ಈ ಬಗ್ಗೆ ಡಿ.ಕೆ ಶಿವಕುಮಾರ್ ತನ್ನ ಸಾಮಾಜಿಕ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಬರೆದುಕೊಂಡಿದ್ದಾರೆ.





















































 
 

ಡಿ.ಕೆ ಶಿವಕುಮಾರ್ ಅನಾರೋಗ್ಯದ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಡಿ.ಕೆ ಶಿವಕುಮಾರ್​​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಈ ಬಗ್ಗೆ ಸುರ್ಜೆವಾಲ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಡಿ.ಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಖಚಿತವಾಗಿದೆ.

ಜ್ವರದಿಂದ ಬಳಲುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೆವಾಲ ಕರೆ ಮಾಡಿ ಕಳೆದ ಕೆಲವು ದಿನಗಳಿಂದ ನಿರಂತರ ಜ್ವರದಿಂದ ಬಳಲುತ್ತಿದ್ದ ಅವರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದ್ದು, ನಮ್ಮ ಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳು ಶೀಘ್ರವಾಗಿ ಚೇತರಿಸಿಕೊಂಡು ಜನರ ಸೇವೆಯಲ್ಲಿ ನಿರತವಾಗಬೇಕೆಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಜುಲೈ 16ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅಂದು ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ವಿಶ್ರಾಂತಿ ಪಡೆದುಕೊಂಡಿದ್ದರು. ಈಗ ಮತ್ತೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೂರು ದಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಹೀಗಾಗಿ ನಾಳೆಯಿಂದ (ಮಂಗಳವಾರ) ಮೂರು ದಿನಗಳ ಕಾಲ ಸಾರ್ವಜನಿಕ ಭೇಟಿ, ಸಭೆ-ಸಮಾರಂಭ, ಕಾರ್ಯಕ್ರಮಗಳಿಂದ ದೂರ ಉಳಿಯಲಿದ್ದಾರೆ.

error: Content is protected !!
Scroll to Top