ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌

ಜು.30ರಂದು ಪ್ರಕಾಶ್‌ ರಾಜ್‌ ವಿಚಾರಣೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್‌ ಸೇರಿ ಹಲವು ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್‌ ನೀಡಿದೆ.

ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಕೊಟ್ಟಿದೆ. ಜು.23 ರಂದು ರಾಣಾ ದಗ್ಗುಬಾಟಿ, ಜು.30 ರಂದು ಪ್ರಕಾಶ್ ರಾಜ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆ.6ರಂದು ವಿಜಯ್ ದೇವರಕೊಂಡ ಅವರನ್ನು ವಿಚಾರಣೆಗೆ ನಡೆಯಲಿದ್ದು, ಆ.13ರಂದು ಲಕ್ಷ್ಮಿ ಮಂಚು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.





















































 
 

ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಪೊಲೀಸರು ದಾಖಲಿಸಿರುವ ಕನಿಷ್ಠ ಐದು ಎಫ್‌ಐಆರ್‌ಗಳ ಆಧಾರದ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಅನಧಿಕೃತ ಜೂಜಾಟಗಳ ಮೂಲಕ ಕೋಟ್ಯಂತರ ರೂ. ಅಕ್ರಮ ಆದಾಯವನ್ನು ಗಳಿಸುತ್ತಿರುವ ಆರೋಪ ಹೊತ್ತಿರುವ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ ಆರೋಪ ಈ ಸೆಲೆಬ್ರಿಗಳ ಮೇಲಿದೆ.

ಇ.ಡಿ ಪ್ರಕರಣದಲ್ಲಿ ಒಟ್ಟು 29 ಸೆಲೆಬ್ರಿಟಿಗಳನ್ನು ಹೆಸರಿಸಿದೆ. ಅವರಲ್ಲಿ ಚಲನಚಿತ್ರ ರಂಗದ ನಿಧಿ ಅಗರ್ವಾಲ್, ಪ್ರಣೀತಾ ಸುಭಾಷ್, ಅನನ್ಯಾ ನಾಗಲ್ಲ ಮತ್ತು ಟಿವಿ ನಿರೂಪಕಿ ಶ್ರೀಮುಖಿ ಸೇರಿದಂತೆ ಪ್ರಭಾವಿಗಳೂ ಇದ್ದಾರೆ.

error: Content is protected !!
Scroll to Top