ನವದೆಹಲಿ: ಪ್ರಧಾನಿ ಮೋದಿ ಅವರು ನಾಲ್ಕು ದಿನಗಳ ಲಂಡನ್, ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದು, ತಡರಾತ್ರಿ ಬ್ರಿಟನ್‌ಗೆ ಬಂದಿಳಿದಿದ್ದಾರೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾಮರ್ ಅವರು ಪ್ರಧಾನಿ ಮೋದಿ ಅವರಿಗೆ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದ್ದಾರೆ. ಬ್ರಿಟನ್ನಿನ ಭಾರತೀಯ ಸಮುದಾಯವನ್ನು ಭೇಟಿಯಾದ ಪ್ರಧಾನಿ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಮುಂದಿನ ಎರಡು ದಿನಗಳ ಬ್ರಿಟನ್ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದ್ದಾರೆ. ಅಲ್ಲಿನ ಪ್ರಧಾನಿಯ ಜೊತೆಗೆ ಅವರು ಈ ಬಗ್ಗೆ ಮಾತುಕತೆ ನಡೆಸಲಿದ್ದು, ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
























