ಬಸ್‌ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ : ತನಿಖೆಗೆ 6 ತಂಡ ರಚನೆ

ಬಿಎಂಟಿಸಿ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಸಿಕ್ಕಿದ ಸ್ಫೋಟಕಗಳಿದ್ದ ಬ್ಯಾಗ್‌

ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ನಿನ್ನೆ ನಸುಕಿನ ಹೊತ್ತು ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ನಗರದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಈ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರು ಆರು ತಂಡ ರಚನೆ ಮಾಡಿದ್ದಾರೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್​​ಗಳು​ ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಕ ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದವು. ಆ ಸಂದರ್ಭಧಲ್ಲಿ ಒಂದು ಬ್ಯಾಗ್​​ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿ ಜೊತೆಗೆ ಕೆಲವು ಡಿಟೋನೆಟರ್​ಗಳು​ ಕೂಡ ಇದ್ದವು.





















































 
 

6 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ವ್ಯಕ್ತಿಯೊಬ್ಬ ಈ ಬ್ಯಾಗ್‌ನ ಜೊತೆ ಕುಳಿತಿರುವುದು ಕಂಡುಬಂದಿದ್ದು, ಬಂಡೆ ಒಡೆಯುವ ಕೆಲಸಗಾರರು ಬಿಟ್ಟುಹೋಗಿರುವ ಶಂಕೆ ಉಂಟಾಗಿದೆ. ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿದ್ದಾರೆಯೇ ಅಥವಾ ಮರೆತು ಹೋಗಿದ್ದಾರೆಯೇ ಎಂಬುದನ್ನನು ಪರಿಶೀಲಿಸಲಾಗುತ್ತಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದರು.

error: Content is protected !!
Scroll to Top