ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು: ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌

ಕಡಬ: ತಾಲೂಕಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ಇಲ್ಲಿ ಇಂದು (ಜುಲೈ 25) ರಾತ್ರಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ ಮತ್ತು ಕುಂಕುಮಾರ್ಚನೆ ‌ನಡೆಯಲಿದೆ.

ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಡುಪು ನರಸಿಂಹ ತಂತ್ರಗಳ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಭಾಗವಹಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಗೆಯೇ, ದೇಗುಲದಲ್ಲಿ ಜುಲೈ 29 ರಂದು ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ ನಡೆಯಲಿದೆ. ಹಾಗೆಯೇ ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು 108 ತೆಂಗಿನಕಾಯಿ ಗಣಪತಿ ಹೋಮ ನಡೆಯಲಿದ್ದು, ಈ ಕಾರ್ಯಕ್ರಮಗಳಿಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.





















































 
 
error: Content is protected !!
Scroll to Top