ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ : ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಶನಿವಾರ ನಡೆದಿದೆ. ಕಾರು ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದೆ. ಹೀಗಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ವಾಹನ ಚಾಲಕ, ಮಾಲಕರು ತಿಳಿಸಿದ್ದಾರೆ.

error: Content is protected !!
Scroll to Top