ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ : ಆರು ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಲ್ಲಿ ಆರು ಕಡೆ ದಾಳಿ ನಡೆಸಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೆಂಗಳೂರಿನ ಕಂದಾಯ ಅಧಿಕಾರಿ ವೆಂಕಟೇಶ್, ಬಿಡಿಎ ಕಚೇರಿಯ ಸಿನಿಯರ್ ಅರ್ಟಿಕಲ್ಚರ್ ಡೈರೆಕ್ಟರ್ ಓಂ ಪ್ರಕಾಶ್‌, ರಾಷ್ಟ್ರೀಯ ಹೆದ್ದಾರಿ ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ, ಚಿಕ್ಕಬಳ್ಳಾಪುರದ ಜ್ಯೂನಿಯರ್ ಎಂಜಿನಿಯರ್ ಆಂಜನೇಯ ಮೂರ್ತಿ, ಚಿತ್ರದುರ್ಗದ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಟಿಎಚ್‌ಒ ಡಾ.ವೆಂಕಟೇಶ್‌ಗೆ ಸೇರಿದ ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್ ಮೇಲೆ ದಾಳಿ ನಡೆಸಲಾಗಿದೆ. ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಜೆಇ ಆಂಜನೇಯ ಮೂರ್ತಿಗೆ ಸೇರಿದ ಯಲಹಂಕ ನ್ಯೂ ಟೌನ್‌ನಲ್ಲಿರುವ ಮನೆ ಹಾಗೂ ಸ್ವಗ್ರಾಮ ತುಮಕೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಗೌರಿಬಿದನೂರು ಕಚೇರಿ ಮೇಲೂ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದೆ.





















































 
 

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌ಎಐ) ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣಗೆ ಸೇರಿದ ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನಲ್ಲಿರುವ ನಿವಾಸ, ಪತ್ನಿಯ ನಿವಾಸ, ಹಾರ್ಡ್‌ವೇರ್ ಅಂಗಡಿ, ಇತರ ಎರಡು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗುತ್ತಿದೆ.

error: Content is protected !!
Scroll to Top