ನವದೆಹಲಿ: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಚರ್ಚೆಯ ವೇಳೆ ವಿರೋಧ ಪಕ್ಷಗಳ ಮೇಲೆ ಹರಿಹಾಯ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೀವಿನ್ನೂ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರುತ್ತೀರಿ ಎಂದು ಹೇಳಿದ್ದಾರೆ.
ವಿಪಕ್ಷಗಳು ಭಾರತದ ವಿದೇಶಾಂಗ ವ್ಯವಸ್ಥೆಗಳ ಮೇಲೆ ನಂಬಿಕೆ ಇರಿಸಿಲ್ಲ. ಆದರೆ ಇನ್ಯಾವುದೋ ರಾಷ್ಟ್ರದ ಮೇಲೆ ನಂಬಿಕೆ ಹೊಂದಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಅವರ ಪಕ್ಷದಲ್ಲಿ ವಿದೇಶೀಯರ ಪ್ರಾಮುಖ್ಯತೆಯ ಬಗ್ಗೆ ನಮಗೆ ಆಕ್ಷೇಪ ಇದೆ ಎಂದು ಅವರು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ್ಗೆ ಸಂಬಂಧಿಸಿದ ಹಾಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಾತನಾಡುವ ವೇಳೆ ವಿಪಕ್ಷಗಳು ಅಡ್ಡಿ ಮಾಡುತ್ತಿದ್ದವು. ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಶಾ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವುದಾಗಿದೆ.
























