ಬೆಂಗಳೂರು ಅಪಾರ್ಟ್‌ಮೆಂಟ್‌ನಲ್ಲಿ ದೇಶ ವಿರೋಧಿ ಗೋಡೆ ಬರಹ

ಬೆಂಗಳೂರು: ನಗರದ ಕೊಡಿಗೇಹಳ್ಳಿಯ ಅಲ್ಫೈನ್ ಫಿರಮಿಡ್ ಅಪಾರ್ಟ್‌ಮೆಂಟ್‌ನಲ್ಲಿ ‘ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ನಾನು ಬ್ಲಾಸ್ಟ್ ಮಾಡುತ್ತೇನೆ’ ಎಂಬ ದೇಶ ವಿರೋಧಿ ಘೋಷಣೆ ಕಾಣಿಸಿಕೊಂಡಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿದೆ.

ಈ ಅಪಾರ್ಟ್‌ಮೆಂಟ್‌ನಲ್ಲಿ 200 ರಿಂದ 300 ಮನೆಗಳಿವೆ. ಈ ಗೋಡೆ ಬರಹ ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ.

ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಶ್ವಾನ ದಳದ ಜೊತೆಗೆ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಪಾಯಕಾರಿಯಾಗಿರುವ ಯಾವುದೇ ವಸ್ತುಗಳು ಲಭ್ಯವಾಗಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.





















































 
 

ಅಪಾರ್ಟ್‌ಮೆಂಟ್ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು, ಈ ಬರಹವನ್ನು ಮಗುವೊಂದು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ಇನ್ನೂ ದಾಖಲಾಗಿಲ್ಲ ಎಂಬ ಮಾಹಿತಿ ಇದೆ.

error: Content is protected !!
Scroll to Top