ನವದೆಹಲಿ: ಯಾವುದೇ ವ್ಯಾಪಾರ ಒಪ್ಪಂದದ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪೀಯುಷ್ ಗೋಯಲ್ ಹೇಳಿದ್ದಾರೆ.
ಭಾರತದ ಸತ್ತ ಆರ್ಥಿಕತೆ ಎಂದ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಳೆದ ದಶಕದಲ್ಲಿ ಭಾರತ ದುರ್ಬಲ ಆರ್ಥಿಕತೆಯಿಂದ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯಾಗಿ ಬೆಳೆಯುತ್ತಿದೆ ಎಂದಿದ್ದಾರೆ.
ವಿಶ್ವದ ಆರ್ಥಿಕತೆಗಳಲ್ಲಿ ಭಾರತ ಬೆಳಗುತ್ತಿದೆ ಎಂದು ಜಾಗತಿಕ ಸಂಸ್ಥೆಗಳು, ಆರ್ಥಿಕ ತಜ್ಞರು ಹೇಳುತ್ತಿದ್ದಾರೆ ಎಂದು ಗೋಯಲ್ ನುಡಿದಿದ್ದಾರೆ.
























