ಬಾಲಕನನ್ನು ಅಪಹರಿಸಿ ಕೊಂದು ಸುಟ್ಟು ಹಾಕಿದ ಪಾತಕಿಗಳು

5 ಲ.ರೂ. ಒತ್ತೆಹಣಕ್ಕಾಗಿ 13 ವರ್ಷದ ಬಾಲಕನ ಅಪಹರಣ

ಬೆಂಗಳೂರು: ಟ್ಯೂಷನ್‌ಗೆ ಹೋಗಿ ಹಿಂದಿರುತ್ತಿದ್ದ ಬಾಲಕನನ್ನು ಒತ್ತೆಹಣಕ್ಕಾಗಿ ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ.

13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದು, ದುಷ್ಕರ್ಮಿಗಳು ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬಾಲಕನ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದರು.





















































 
 

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ನಡೆಸುತ್ತಿದ್ದಂತೆ ಮತ್ತೊಂದೆಡೆ 5 ಲಕ್ಷ ರೂ. ಹಣವನ್ನು ಕೈಯಲ್ಲಿಡಿದು ಪೋಷಕರು ಕಾದು ಕುಳಿತಿದ್ದರು.

ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

error: Content is protected !!
Scroll to Top