ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ

ತನಿಖಾ ತಂಡ ವರದಿ ನೀಡುವವರೆಗೆ ಹೇಳಿಕೆ ಕೊಡುವುದಿಲ್ಲ ಎಂದ ಗೃಹ ಸಚಿವ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದಿರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.





















































 
 

ದ್ವೇಷ ಭಾಷಣದ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಪ್ರಕರಣಗಳು ಕಡಿಮೆಯಾಗಿವೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್‌ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.

error: Content is protected !!
Scroll to Top