ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಪೂರ್ವಭಾವಿಯಾಗಿ ಅನುಜ್ಞಾ ಕಲಶ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆಯೊಂದಿಗೆ ಶುಕ್ರವಾರ ನಡೆಯಿತು.
ಕ್ಷೇ್ತ್ರದ ವೇ.ಮೂ.ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೇ.ಮೂ. ಗುರು ತಂತ್ರಿ ಶ್ರೀ ದೇವರಿಗೆ ಅನುಜ್ಞಾ ಕಲಶ ನೆರವೇರಿಸಿದರು. ಬಳಿಕ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದರು.
ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ,ರಾಮದಾಸ್ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್. ರಾವ್, ವೀಣಾ ಬಿ.ಕೆ., ಶೇಖರ್ ನಾರಾವಿ ಮತ್ತಿತರರು ಉಪಸ್ಥಿತರಿದ್ದರು.