ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹುಬ್ಬಳ್ಳಿ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕಥಾ ಬಿಂದು ಪ್ರಕಾಶನ ಮಂಗಳೂರು, ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ಪುತ್ತೂರು ಸಹಯೋಗದಲ್ಲಿ ಶಿಕ್ಷಕ ಕವಿಗಳಿಗಾಗಿ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿ ಮತ್ತು ಸಾಹಿತಿ ಜಯಾನಂದ ಪೆರಾಜೆ ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ ಪುತ್ತೂರಿನ ರೋಟರಿ ಜಿ.ಎಲ್. ಸಭಾ ಭವನದಲ್ಲಿ ಆಗಸ್ಟ್ 4 ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ.
ಮಧ್ಯಾಹ್ನ 1.30 ಗಂಟೆಯಿಂದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ, ಕಾಸರಗೋಡಿನ ಡಾ. ವಾಣಿಶ್ರೀ ಸರಥ್ಯದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ.
ಸರ್ವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























