ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ನಿಧನ

ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್‌ 81ನೇ ವಯಸ್ಸಿನಲ್ಲಿ ಇಂದು ವಿಧಿವಶರಾಗಿದ್ದಾರೆ.

ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ.

ತಂದೆಯ ನಿಧನದ ಮಾಹಿತಿಯನ್ನು ಪುತ್ರ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರೀತಿಯ ದಿಶೋಮ್ ಗುರೂಜಿ ನಮ್ಮನ್ನ ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ ಎಂದು ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ.





















































 
 

ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖಂಡರಾದ ಶಿಬು ಸೊರೇನ್ ಅವರು ಕಳೆದ 38 ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿದ್ದರು. 4 ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಶಿಬು ಸೊರೇನ್‌ ತಮ್ಮದೇ ಛಾಪು ಮೂಡಿಸಿದ್ದಾರೆ. 8 ಬಾರಿ ಲೋಕಸಭೆಗೆ, ಎರಡು ಅವಧಿಗೆ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು.

error: Content is protected !!
Scroll to Top