ಅನಾರೋಗ್ಯ ಉಲ್ಬಣಿಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ
ಬೆಂಗಳೂರು : ಕನ್ನಡ ಚಿತ್ರರಂಗದ ಯುವ ನಾಯಕ ನಟ ಸಂತೋಷ್ ಬಾಲರಾಜ್ (34) ಇಂದು ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.
ಜಾಂಡೀಸ್ ಉಲ್ಬಣಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.
























