ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ

ಉತ್ತರಾಖಂಡ: ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಪೋಟಕ್ಕೆ ಮನೆಗಳು ಕೊಚ್ಚಿ ಹೋಗಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ.

ಉತ್ತರಕಾಶಿಯ ಧರೇಲಿ ಗ್ರಾಮದಲ್ಲಿ ಗಂಗಾ ನದಿಯಲ್ಲಿ ಭಾರೀ ಮಳೆಯ ಕಾರಣಕ್ಕೆ ಪ್ರವಾಹ ಉಂಟಾಗಿದೆ. ಪರಿಣಾಮ ಪ್ರವಾಹಕ್ಕೆ ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಸುಮಾರು 50 ಕ್ಕೂ ಹೆಚ್ಚು ಜನರು ಈ ಘಟನೆಯಲ್ಲಿ ನಾಪತ್ತೆಯಾಗಿದ್ದಾಗಿ ಸಂಬಂಧಿಸಿದ ಅಧಿಕಾರಿಗಳು ಸಂದೇಹ ವ್ಯಕ್ತಪಡಿಸಿದ್ದಾರೆ.

ಬೆಟ್ಟ ಪ್ರದೇಶದಿಂದ ಏಕಾಏಕಿ ಮೇಘಸ್ಪೋಟ ಸಂಭವಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನದಿ ತೀರದಲ್ಲಿನ ‌ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.





















































 
 
error: Content is protected !!
Scroll to Top