ಧರ್ಮಸ್ಥಳ: ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ಮುಖ್ಯಸ್ಥ ಡಾ. ಪ್ರಣಬ್ ಮೊಹಂತಿ ತನಿಖಾ ತಂಡದಿಂದ ಈ ವರೆಗಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಈಗಾಗಲೇ ಅನಾಮಿಕ ದೂರುದಾರ ಗುರುತು ಮಾಡಿರುವ ಸ್ಥಳಗಳಲ್ಲಿ ಶೋಧ ಕಾರ್ಯ ಬುಧವಾರ ಮುಗಿಯುತ್ತಿದ್ದು,
ಆ ನಂತರದಲ್ಲಿ SIT ಯಾವ ರೀತಿಯಲ್ಲಿ ತನಿಖೆ ನಡೆಸಲಿದೆ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
























