ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಬುಧವಾರ ತಡರಾತ್ರಿ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ನಡೆದಿದೆ.
ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ವ್ಯಕ್ತಿ.
ಶಿವಪ್ಪ ಅವರು ಬುಧವಾರ ರಾತ್ರಿ ಸುಮಾರು 10.30 ರ ಸಮಯ ಮನೆ ಬಳಿಯ ತೋಟದಲ್ಲಿ ನಾಯಿ ಬೊಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭ ಆನೆ ತುಳಿದಿದೆ. ತಕ್ಷಣ ಅವರನ್ನು ಮನೆಯವರು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
























