ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್

ಧರ್ಮಸ್ಥಳ: ವಿದೇಶಿ ಹಣ ಬಳಕೆ ಮಾಡಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿರುವ ಬಗ್ಗೆ ಅನುಮಾನ ಇದೆ. NIA ತನಿಖೆಗೆ ಈ ಪ್ರಕರಣವನ್ನು ಒಪ್ಪಿಸಬೇಕು ಎಂದು ಪುಣ್ಯ ಕ್ಷೇತ್ರ ಸಮಿತಿಯ ಸಂಚಾಲಕ ವಸಂತ ಗಿಳಿಯಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸುಕುಧಾರಿ ದೂರುದಾರ ಯಾರ ಮೇಲೆ ಆರೋಪ ಮಾಡಿದ್ದಾನೆ ಎನ್ನುವುದು ಗೊತ್ತಿಲ್ಲ.‌ ಹಾಗಿದ್ದರೂ ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಮಂಜುನಾಥ ಸ್ವಾಮಿ, ಧರ್ಮಾಧಿಕಾರಿಗಳ ಚಿತ್ರ ಬಳಕೆ ಮಾಡಲಾಗುತ್ತಿದೆ. ಇದು ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಾಗಿದೆ‌. ಆದ್ದರಿಂದ ಈ ತಿಂಗಳಲ್ಲಿಯೇ ಧರ್ಮಸ್ಥಳದಲ್ಲಿ ಧರ್ಮ ಜಾಗರಣಾ ಸಮಾವೇಶ ನಡೆಸುವುದಾಗಿ ತಿಳಿಸಿದರು.

ಕೆಲವು ಅನಧಿಕೃತ ಮಾಧ್ಯಮಗಳು, ಯೂಟ್ಯೂಬರ್‌ಗಳ ಮೂಲಕ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದೆ. ಇಂತಹವುಗಳ ಮೇಲೆ ಪೊಲೀಸರು ಕ್ರಮ ಕೈಗೊಳ್ಳುವಂತೆಯೂ ಅವರು ಆಗ್ರಹಿಸಿದರು.





















































 
 
error: Content is protected !!
Scroll to Top