ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌

ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕ

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಒಂದನೇ ಆರೋಪಿಯಾಗಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಹೆಸರಿಸಲಾಗಿದೆ. ನಾಗೇಶ ಮತ್ತು ಮಂಜುನಾಥ್ ಕ್ರಮವಾಗಿ ಎರಡನೇ ಮತ್ತು ಮೂರನೇ ಆರೋಪಿಗಳಾಗಿದ್ದಾರೆ. ಬಿಎನ್‌ಎಸ್ 2023 (u/s 108, 352. 351(2), (3)(5) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ಆಗಿದೆ.





















































 
 

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೆಲೆಯ ಕಾರು ಚಾಲಕನಾಗಿದ್ದ ಬಾಬು ಗುರುವಾರ ಜಿಲ್ಲಾ ಪಂಚಾಯತಿ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಮೃತನ ಕಾರಿನಲ್ಲಿ 4 ಪುಟಗಳ ಡೆತ್‌ನೋಟ್ ಸಿಕ್ಕಿದೆ. ಡೆತ್‌ನೋಟ್‌ನ ಮೊದಲ ಪುಟದಲ್ಲೇ, ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ.ಕೆ.ಸುಧಾಕರ್ ಕಾರಣ ಹಾಗೂ ನಾಗೇಶ್ ಸೇರಿದಂತೆ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್‌ಡಿಎ ಮಂಜುನಾಥ್ ಹೆಸರನ್ನು ಉಲ್ಲೇಖಿಸಿದ್ದಾನೆ ಎಂದು ತಿಳಿದುಬಂದಿದೆ.

error: Content is protected !!
Scroll to Top