ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಶ್ರೀ ವರಮಹಾ ಲಕ್ಷ್ಮಿ ಪೂಜೆ ಶುಕ್ರವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಜರಗಿತು.


ಪೂಜೆಯ ಅಂಗವಾಗಿ ಬೆಳಿಗ್ಗೆ 7.30ಕ್ಕೆ ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆದು, ಮಧ್ಯಾಹ್ನ ಮಹಾಪೂಜೆ ನಡೆಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಜಯಶ್ರೀ ಆಚಾರ್ಯ ಕೆಮ್ಮಿಂಜೆ ದೀಪ ಬೆಳಗಿ ಉದ್ಘಾಟಿಸಿದರು.


ಪುತ್ತಿಲ ಪರಿವಾರ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಕೋಶಾಧಿಕಾರಿ ಗಣೇಶ್ ಚಂದ್ರ ಮಾಣಿ, ಪೂಜಾ ಸಮಿತಿ ಅಧ್ಯಕ್ಷೆ ಪ್ರೇಮ ರೈ, ಕಾರ್ಯದರ್ಶಿ ಅನ್ನಪೂರ್ಣ ಬಲ್ಲಾಳ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು





















































 
 
error: Content is protected !!
Scroll to Top