ಚಿಕ್ಕಮಗಳೂರು: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಆರೋಪದಡಿ ಧರ್ಮಸ್ಥಳದ ಸುತ್ತಮುತ್ತ SIT ತನಿಖೆ ನಡೆಯುತ್ತಿದ್ದು, ಇದೇ ರೀತಿಯಲ್ಲಿ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿಯೂ ಉತ್ಖನನ ಕಾರ್ಯ ನಡೆಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್. ಲೋಕೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ದತ್ತಪೀಠದ ಆವರಣದಲ್ಲಿ ಗೋರಿಗಳಿದ್ದು, ಇವು ನಕಲಿಯೋ ಅಸಲಿಯೋ ಎಂಬ ಬಗ್ಗೆ ಉತ್ಖನನ ನಡೆಸುವುದು ಅಗತ್ಯವಾಗಿದೆ. ಇದಕ್ಕಾಗಿ ಸರ್ಕಾರ SIT ರಚಿಸುವಂತೆಯೂ ಆಗ್ರಹಿಸಿದ್ದಾರೆ.
ದತ್ತಪೀಠ ಹಿಂದೂಗಳ ಧಾರ್ಮಿಕ ಸ್ಥಳ. ಅಲ್ಲಿ ನಕಲಿ ಗೋರಿಗಳ ನಿರ್ಮಾಣವಾಗಿದೆ. ಈ ಬಗ್ಗೆ ಸತ್ಯ ಸಂಗತಿ ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳು ಹೇಳಿವೆ.
























