ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ನಗರದಲ್ಲಿ ಮಂಗಳವಾರ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಯಿತು.
ಪಕ್ಷದ ಕಚೇರಿಯಿಂದ ಹೊರಟು ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿ ಮರಳಿ ಕಚೇರಿ ಮುಂಭಾಗದಲ್ಲಿ ಯಾತ್ರೆ ಸಮಾಪನಗೊಂಡಿತು. ರಾಷ್ಟಧ್ವಜವನ್ನು ಹಿಡಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
























