ಧರ್ಮಸ್ಥಳ ತನಿಖೆ ಮುಗಿಯುವ ಮೊದಲೇ ತೀರ್ಪು ಕೊಡುವುದು ಬೇಡ : ಸ್ಪೀಕರ್‌ ಖಾದರ್‌ ಮನವಿ

ಸದನದಲ್ಲಿ ಇನ್ನಷ್ಟು ಚರ್ಚೆಗೆ ಅವಕಾಶ ಕೊಡುವ ಭರವಸೆ ಕೊಟ್ಟ ಸ್ಪೀಕರ್‌

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಗಿಯುವವರೆಗೆ ಧಾರ್ಮಿಕ ಸ್ಥಳದ ಪಾವಿತ್ರ್ಯವನ್ನು ಎಲ್ಲರೂ ಕಾಪಾಡಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನಸೌಧಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಬಗ್ಗೆ ಈಗಾಗಲೇ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಮಂಗಳವಾರ ವಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿದ್ದವು. ಶೂನ್ಯವೇಳೆಯಲ್ಲಿ ಅವಕಾಶ ಕೊಟ್ಟಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ಕೊಟ್ಟಿದೆ. ಮತ್ತಷ್ಟು ಚರ್ಚೆಗೆ ಅವಕಾಶ ಬೇಕು ಅಂತ ಕೇಳಿದ್ದಾರೆ. ನಾನು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದರು.





















































 
 

ಧರ್ಮಸ್ಥಳ ಕೇಸ್‌ನಲ್ಲಿ ಎಸ್‌ಐಟಿ ನಿಷ್ಪಕ್ಷಪಾತವಾಗಿ ತನಿಖೆ ಮಾಡುವುದಕ್ಕೆ ಬಿಡಬೇಕು. ತನಿಖೆ ಮುಗಿಯುವ ಮುನ್ನವೇ ನಾವೇ ತೀರ್ಪು ಕೊಡುವುದು ಸರಿಯಲ್ಲ. ಧಾರ್ಮಿಕ ಸ್ಥಳದ ಪಾವಿತ್ರ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯ. ಈ ವಿಚಾರದಲ್ಲಿ ಯಾರೂ ಸ್ವಯಂ ಅಭಿಪ್ರಾಯ ಕೊಡಬಾರದು ಎಂದು ತಿಳಿಸಿದರು.

ಎಸ್‌ಐಟಿ ತನಿಖೆ ಆಗುವವರೆಗೆ ಎಲ್ಲರೂ ಸಮಾಧಾನವಾಗಿ ಇರಬೇಕು. ನಾವು ಸಮಾನತೆ, ಸೋದರ ಭಾವನೆಯಲ್ಲಿ ಇರುವವರು. ಹೀಗಾಗಿ ತನಿಖೆ ಆಗುವ ಮುನ್ನ ಯಾರೂ ಮಾತಾಡೋದು ಬೇಡ. ಸದನದಲ್ಲಿ ಧರ್ಮಸ್ಥಳದ ವಿಚಾರವಾಗಿ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

error: Content is protected !!
Scroll to Top