ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮಾ.19 ಭಾನುವಾರ ಚಂದಳಿಕೆ ಭಾರತ್ ಆಡಿಟೋರಿಯಂನಲ್ಲಿ ನಡೆಯಲಿದೆ.
ಬೆಳಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ 9400 ಹಕ್ಕು ಪತ್ರ ವಿತರಣೆಯೂ ನಡೆಯಲಿದೆ.
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.