ದರ್ಶನ್ ಜಾಮೀನು ರದ್ದು: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, ಈ ಹಿನ್ನೆಲೆ‌ಯಲ್ಲಿ ನಟಿ ರಮ್ಯಾ ಅವರು ಇನ್ಸ್ಟಾಗ್ರಾಮ್‌ನಲ್ಲಿ ‌ಸ್ಟೋರಿ ಹಾಕಿಕೊಂಡಿದ್ದಾರೆ.

ರೇಣುಕಾಸ್ವಾಮಿ ‌ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎನ್ನುವ ಬಲವಾದ ಸಂದೇಶವನ್ನು ರವಾನಿಸಿದೆ.

ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ ಎಂದು ನಾನು ಉಳಿದವರಿಗೂ ಹೇಳಲು ಬಯಸುತ್ತೇನೆ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಡಿ. ಈ ಪ್ರಯಾಣ ಧೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕೊಂದು ಕಂಡೇ ಕಾಣುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ನಿಮ್ಮ ಪ್ರಜ್ಞೆಗೆ ನಿಷ್ಠೆ ತೋರಿಸಿ ಎಂದು ಅವರು ತಿಳಿಸಿದ್ದಾರೆ.





















































 
 
error: Content is protected !!
Scroll to Top