ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ್, ಪವಿತ್ರ ಗೌಡ ಮತ್ತು ಇತರ ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮೃತನ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಮಾತನಾಡಿ, ತಮ್ಮ ಮಗನ ಸಾವಿಗೆ ನ್ಯಾಯ ಒದಗಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.
ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು. ನಮ್ಮ ಮನೆಯವರು ಪೂಜೆಗೆ ಕುಳಿತ ಸಮಯದಲ್ಲೇ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದ್ದು, ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ದೊರೆಯುವ ವಿಶ್ವಾಸ ಇತ್ತು ಎಂದು ತಿಳಿಸಿದ್ದಾರೆ.
























