ನವದೆಹಲಿ: ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಮತಗಳ್ಳತನ, ಚುನಾವಣಾ ಅಕ್ರಮ ನಡೆದಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
ವೋಟ್ ಚೋರಿ ಮೊದಲಾದ ಕೊಳಕು ಭಾಷೆಗಳನ್ನು ಬಳಕೆ ಮಾಡುವುದಲ್ಲ. ಸುಳ್ಳು ನಿರೂಪಣೆಗಳನ್ನು ಮಾಡುವ ಬದಲು ಅದಕ್ಕೆ ಪೂರಕ ದಾಖಲೆ ಒದಗಿಸುವಂತೆ ಹೇಳಿದೆ.
ಒಬ್ಬ ವ್ಯಕ್ತಿಗೆ ಒಂದು ಮತ ಎನ್ನುವ ಕಾನೂನು ಬಹಳ ಹಿಂದಿನಿಂದಲೇ ಚಾಲ್ತಿಯಲ್ಲಿದೆ. ಯಾವ ಸಾಕ್ಷ್ಯವೂ ಇಲ್ಲದ ಭಾರತದ ಮತದಾರರನ್ನು ಕಳ್ಳರು ಎಂದು ಹೇಳುವುದಲ್ಲ. ಯಾರಾದರೂ ಒಂದಕ್ಕಿಂತ ಹೆಚ್ಚು ಬಾರಿ ಮತ ಚಲಾಯಿಸಿದ್ದಕ್ಕೆ ಸಾಕ್ಷಿ ಇದ್ದರೆ ಅದನ್ನು ಚು. ಆಯೋಗಕ್ಕೆ ಸಲ್ಲಿಸಬೇಕು ಎಂದು ತಿಳಿಸಿದೆ.
























