ಲಿಟ್ಲ್ ಫ್ಲವರ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಚೇತನ್ ಕುಮಾರ್, ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಶಿಕ್ಷಕಿ ದಿವ್ಯ ವಂದಿಸಿ, ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.





















































 
 
error: Content is protected !!
Scroll to Top