ಕೆಂಪು ಕೋಟೆಯ ಸ್ವಾತಂತ್ರ್ಯ ದಿನಕ್ಕೆ ರಾಹುಲ್, ಖರ್ಗೆ ಗೈರು

ನವದೆಹಲಿ: ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಗೆ ವಿಪಕ್ಷ ‌ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.

ಗೈರು ‌ಹಾಜರಿಯ ಬಗ್ಗೆ ಈ ಇಬ್ಬರು ನಾಯಕರು ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಕಳೆದ ವರ್ಷದ ಆಸನ ವ್ಯವಸ್ಥೆಯ ಅಸಮಾಧಾನದಿಂದ ಈ ಬಾರಿ ಗೈರಾಗಿರಬಹುದು ಎಂದು ಹೇಳಲಾಗುತ್ತಿದೆ.

ಖರ್ಗೆ ‌ಮತ್ತು ರಾಹುಲ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ‌ದೇಶದ ಜನರಿಗೆ ಶುಭಾಶಯ ಕೋರಿ ಪೋಸ್ಟ್ ಮಾಡಿದ್ದಾರೆ. ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಖರ್ಗೆ ‌ಕಾಣಿಸಿಕೊಂಡಿದ್ದರು.





















































 
 
error: Content is protected !!
Scroll to Top