ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೇಳಿದ್ದಾರೆ.
ಆನಂದಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಭಕ್ತಾದಿಗಳ ನಂಬಿಕೆಯ ಕ್ಷೇತ್ರ ಧರ್ಮಸ್ಥಳ. ಅಂತಹ ಕ್ಷೇತ್ರವನ್ನು ಅಪವಿತ್ರ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಅನಾಮಿಕ ದೂರುದಾರ ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ SIT ತಂಡವನ್ನು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ರಾಜ್ಯ ಸರ್ಕಾರ ರಚನೆ ಮಾಡಿದೆ. ಆದರೆ ಆತ ಗುರುತಿಸಿದ ಯಾವ ಸ್ಥಳದಲ್ಲೂ ಕುರುಹುಗಳು ಸಿಕ್ಕಿಲ್ಲ. ಧರ್ಮಸ್ಥಳ ಎಂಬ ಪವಿತ್ರ ಕ್ಷೇತ್ರದ ಬಗ್ಗೆ ನಾನು ವಿಧಾನಸೌಧದಲ್ಲಿ ಧ್ವನಿ ಎತ್ತಿದ್ದೇನೆ. ಕ್ಷೇತ್ರವನ್ನು ಅಪವಿತ್ರ ಮಾಡಲು ಹೊರಟ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ನುಡಿದಿದ್ದಾರೆ.
























