ಬೆಂಗಳೂರು: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ AI ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ ಇದ್ದು, ಆದ್ದರಿಂದ ಇದನ್ನು ಕೈ ಬಿಡುವಂತೆ ಒತ್ತಾಯಿಸಲಾಗಿದೆ.
ಆದರೆ ಅಧಿಕಾರಿಗಳ ಪ್ರಕಾರ ಮಕ್ಕಳ ಗೈರು ಹಾಜರಿಯನ್ನು ಪತ್ತೆ ಮಾಡಲು, ಆಹಾರ, ಮೊಟ್ಟೆಯಂತಹ ಪ್ರಯೋಜನಗಳು ಮಕ್ಕಳನ್ನು ಸರಿಯಾಗಿ ತಲುಪುತ್ತಿವೆಯೇ ಎಂದು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯೋಜನಕಾರಿ ಎಂದು ಹೇಳಿದ್ದಾರೆ.
























