5 ಕೋ.ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು : ಡ್ರಗ್ಸ್‌ ದಂಧೆ ವಿರುದ್ಧ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬೆಂಗಳೂರು ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ ಅವರಿಂದ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಆಫ್ರಿಕಾ ಮೂಲದ ಜೊಯಲ್ ಕಾಬೊಂಗ್ ಮತ್ತು ಜೊಯ್ ಸಂಡೇ ಬಂಧಿತ ಆರೋಪಿಗಳು. ಜೊಯಲ್ ಕಾಬೊಂಗ್​ 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ. ಜೊಯ್ ಸಂಡೇ ಮೂರು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಲ್ಲಿ ವಾಸವಾಗಿದ್ದರು. ಈ ಇಬ್ಬರು ಮತ್ತೊಬ್ಬನಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದರು. ಆ.15ರ ಸಂಜೆ ಬೆಟ್ಟದಾಮಸಪುರದಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅವರಿಂದ 2.150 ಕೆಜಿ ಎಂಡಿಎಂಎ ವಶಕ್ಕೆ ಪಡೆದು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸೀಮಂತ್ ಕುಮಾರ್ ಸಿಂಗ್​ ಹೇಳಿದ್ದಾರೆ.

ಇನ್ನೊಂದು ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ಡ್ರಗ್ಸ್​ ಪೆಡ್ಲಿಂಗ್ ಮಾಡುತ್ತಿದ್ದ ಆಫ್ರಿಕನ್ ಮೂಲದ ಜಾನ್ ಡಿಕೊಸ್ಟೋ ಎಂಬಾತನನ್ನ ಬಂಧಿಸಿದ್ದು, 40 ಲಕ್ಷ ರೂ. ಮೌಲ್ಯದ 255 ಗ್ರಾಂ. ತೂಕದ ಎಂಡಿಎಂಎ ಕ್ರಿಸ್ಟೆಲ್ ವಶಕ್ಕೆ ಪಡೆಯಲಾಗಿದೆ. ಟೂರಿಸ್ಟ್ ವೀಸಾದಡಿಯಲ್ಲಿ ಬಂದು ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಜಾನ್, ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಆದರೆ ಪರಿಚಯಸ್ಥರು ಹಾಗೂ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ.





















































 
 
error: Content is protected !!
Scroll to Top