ಪುತ್ತೂರು: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಡಾ। ವಿಕ್ರಂ ಸಾರಾಭಾಯಿ ಅವರ ಜನ್ಮದಿನದ ಸ್ಮರಣಾರ್ಥ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮತ್ತು ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಕೆನರಾ ವಿಕಾಸ್ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ವಿಕ್ರಮ ಕಾರ್ಯಕ್ರಮದಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದ ‘ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ’ಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮೂರು ತಂಡಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ವಿಕ್ರಮ್ ಟ್ರೋಫಿ ಹಾಗೂ ಮೂರು ಸಾವಿರ ನಗದು ಬಹುಮಾನ ಪಡೆದುಕೊಂಡಿದೆ.
9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮೇತ್ ಜೈನ್, ಆಶಿಕ್, ಪ್ರಣವ್ ಪ್ರಭು ತಂಡ ದ್ವಿತೀಯ ಸ್ಥಾನಗಳಿಸಿ ರೂಪಾಯಿ 3000 ನಗದು ಬಹುಮಾನ ಮತ್ತು ವಿಕ್ರಮ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಲಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
























