ಪುನರ್ವಸತಿ ಕಾರ್ಯಕರ್ತರ ಗೌರವಧನ ಮೊತ್ತ ಹೆಚ್ಚಳ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಿಯಮಾನುಸಾರವಾಗಿ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಲಾಗಿದ್ದು, ಅವರನ್ನು ಖಾಯಂಗೊಳಿಸಲು ಅವಕಾಶ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮುಂಗಾರು ಅಧಿವೇಶನದ ಏಳನೇ ದಿನದ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವ ಧನವನ್ನು 9000 ರೂ. ಗಳಿಂದ 10000 ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವ ಧನವನ್ನು 15000 ರೂ. ಗಳಿಂದ 16000 ರೂ. ಗಳಿಗೆ ಏರಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top