ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ AI ವಿಡಿಯೋ ಮಾಡಿ ಸಮಾಜದ ದಾರಿ ತಪ್ಪಿಸಿದ ಆರೋಪದಲ್ಲಿ ಪೊಲೀಸರ ಬಂಧನದ ಭೀತಿಯಲ್ಲಿದ್ದ ದೂತ ಸಮೀರನಿಗೆ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳದ ವಿರುದ್ಧ ಸಮೀರ್ ಮಾಡಿದ್ದ AI ವಿಡಿಯೋ ಸಮಾಜದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಈ ಹಿನ್ನೆಲೆ ಆತನ ವಿರುದ್ಧ ಸುಮೋಟೋ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದರು. ಆತನನ್ನು ಬಂಧಿಸುವುದಕ್ಕಾಗಿ ಪೊಲೀಸರು ಬನ್ನೇರುಘಟ್ಟದ ಆತನ ಬಾಡಿಗೆ ಮನೆಯ ಬಳಿಗೂ ತೆರಳಿದ್ದರು.
ಬಂಧನದ ಭೀತಿ ಎದುರಾದ ಬೆನ್ನಲ್ಲೇ ಆತ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಆತನಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
























