ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
























