ಎಸ್‌ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ

ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರು

ಧರ್ಮಸ್ಥಳ: ಇಷ್ಟರ ತನಕ ಮುಸುಕು ಹಾಕಿ ಎಸ್‌ಐಟಿ ಎದುರು ಹಾಜರಾಗುತ್ತಿದ್ದ ವ್ಯಕ್ತಿಯನ್ನು ಇದೇ ಮೊದಲ ಸಲ ಅಧಿಕೃತವಾಗಿ ಗುರುತಿಸಲಾಗಿದ್ದು, ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದೆ. ಎಸ್‌ಐಟಿ ವಿಚಾರಣೆ ವೇಳೆ ಅವನು ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿದ ಬಳಿಕ ಕಳೆದ ಕೆಲವು ದಿನಗಳಿಂದ ಎಸ್‌ಐಟಿ ಅಧಿಕಾರಿಗಳು ಮುಸುಕುಧಾರಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ನಿನ್ನೆ ಇಡೀ ರಾತ್ರಿ ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಖುದ್ದು ಅವನನ್ನು ಪ್ರಶ್ನಿಸಿದ್ದಾರೆ. ಬಳಿಕ ಇಂದು ಬೆಳಗ್ಗೆ ಅವನನ್ನು ಔಪಚಾರಿಕವಾಗಿ ಬಂಧಿಸಲಾಗಿದೆ.





















































 
 

ಆತ ಹೇಳಿದ್ದೆಲ್ಲಾ ಬುರುಡೆ ಎಂದು ವಿಚಾರಣೆ ವೇಳೆ ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ. ನನಗೆ ಈ ರೀತಿ ಹೇಳಲು ಹೇಳಿದರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದರು, ನಾನು ಒಪ್ಪಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಚೆನ್ನ ಹೇಳಿದ್ದಾನೆ. ಇಷ್ಟು ದಿನ ಆತ ಹೇಳಿದ್ದೆಲ್ಲ ಸುಳ್ಳಿನ ಕಂತೆ ಎನ್ನುವುದು ಅವನ ಉತ್ತರಗಳಿಂದ ದೃಢವಾಗಿದೆ.

ಚೆನ್ನನಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, ಬಳಿಕ ಆತನನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲು ಮನವಿ ಎಸ್‌ಐಟಿ ಮನವಿ ಸಲ್ಲಿಸಲಿದೆ.

error: Content is protected !!
Scroll to Top