ಪರವಾನಗಿ ಭೂಮಾಪಕರ ದ.ಕ.ಜಿಲ್ಲೆ, ತಾಲೂಕು ಸಮಿತಿಗಳ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ತೆಂಕಿಲದಲ್ಲಿರುವ ದರ್ಶನ ಕಲಾ ಮಂದಿರದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನಾಗ ವಿ., ಉಪಾಧ್ಯಕ್ಷರಾಗಿ ಪ್ರಶಾಂತ್ ಕೆ ಪೂಜಾರಿ, ಕಾರ್ಯದರ್ಶಿಯಾಗಿ ಬಸವಲಿಂಗೇಗೌಡ ಹೆಚ್.ಜೆ., ಖಜಾಂಜಿಯಾಗಿ ಮಣಿಪ್ರಸಾದ್ ಅವರು ಪದಪ್ರದಾನ ಸ್ವೀಕರಿಸಿದರು.

ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಪೂರ್ಣೇಶ್ ಡಿ.ಎಂ. ಹಾಗೂ ಕಾರ್ಯದರ್ಶಿಯಾಗಿ ಮಧು ಬಿ.ಎಂ. ಅಧಿಕಾರ ಸ್ವೀಕರಿಸಿದರು. ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾಗಿ ಗಣೇಶ್ ಬಿ.ಜೆ, ಕಾರ್ಯದರ್ಶಿಯಾಗಿ ದಿವಾಕರ್ ರೆಡ್ಡಿ, ಉಳ್ಳಾಲ ತಾಲೂಕು ಸಮಿಯ ಅಧ್ಯಕ್ಷರಾಗಿ ಲೋಹಿತ್ ಎನ್., ಕಾರ್ಯದರ್ಶಿಯಾಗಿ ರಕ್ಷಿತ್ ಎಂ.ಕೆ., ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ಲೋಕೇಶಪ್ಪ ಆರ್., ಕಾರ್ಯದರ್ಶಿಯಾಗಿ ಯಶವಂತ, ಮುಲ್ಕಿ ತಾಲೂಕು ಸಮಿತಿ ಅಧ್ಯಕ್ಷರಾಗಿ ಅಭಿಷೇಕ್ ಶೆಟ್ಟಿ, ಕಾರ್ಯದರ್ಶಿಯಾಗಿ ಮನೋಹರ್ ದೇವಾಡಿಗ, ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಪುಟ್ಟೇಗೌಡ, ಕಾರ್ಯದರ್ಶಿಯಾಗಿ ಮಾನಸ ಎಸ್., ಕಡಬ ತಾಲೂಕು ಸಮಿತಿ ಅಧ್ಯಕ್ಷರಾಗಿ ಮಂಜುನಾಥ ಡಿ.ಬಿ. ಕಾರ್ಯದರ್ಶಿಯಾಗಿ ಪ್ರಭಾಕರ, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿ ವಿಜ್ರಾಂತ್ ಶಿರಾಜೆ, ಕಾರ್ಯದರ್ಶಿಯಾಗಿ ತೇಜಸ್, ಮೂಡುಬಿದಿರೆ ತಾಲೂಕು ಸಮಿತಿ ಅಧ್ಯಕ್ಷರಾಗಿ ವಾಸುದೇವ್ ಹಾಗೂ ಕಾರ್ಯದರ್ಶಿಯಾಗಿ ಲೋಕೇಶ್ ಬಿ.ಎನ್. ಅವರು ಪದಪ್ರದಾನ ಸ್ವೀಕರಿಸಿದರು.





















































 
 

ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕಿ ಪ್ರಸಾದಿನಿ ಕೆ. ಮಾತನಾಡಿ, ಬೇಡಿಕೆಗಳನ್ನು ಈಡೇರಿಸಲು ಮತ್ತು ಇನ್ನಿತರ ಸಮಾಜಮುಖಿ ಕಾರ್ಯಗಳನ್ನು ನಡೆಸಲು ಸಂಘನೆಯೊಂದು ಬೇಕೆನ್ನುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪರವಾನಗಿ ಭೂಮಾಪಕರ ಸಂಘ ಹಾಗೂ ವಿವಿಧ ತಾಲೂಕುಗಳ ಸಮಿತಿ ರಚಿಸಿ ಚುನಾವಣೆ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಸಂಘದ ರಾಜ್ಯಾಧ್ಯಕ್ಷ ತಿರುಮಲೇ ಗೌಡ್ರು ಮಾತನಾಡಿ, ಪರವಾನಗಿ ಭೂಮಾಪಕರ ಶ್ರೇಯೋಭಿವೃದ್ಧಿಗಾಗಿ ಈ ಸಂಘ ರಚಿಸಲಾಗಿದೆ. ಇಲಾಖೆ ನೀಡಿದ ಎಲ್ಲಾ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಲಾಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಸಂಭಾವನೆ ಸಿಗುತ್ತಿಲ್ಲ. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಲುಪಿಸಬೇಕಾಗಿದೆ ಎಂದರು.

ಜಿಲ್ಲಾಧ್ಯಕ್ಷ ನಾಗ ವಿ. ಮಾತನಾಡಿ, ಚುನಾವಣೆ ಮೂಲಕ ನನ್ನನ್ನು ಜಿಲ್ಲಾಧ್ಯಕ್ಷನನ್ನಾಗಿ ನೇಮಕ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ನ್ಯಾಯಾ, ನಿಷ್ಠೆ, ಶ್ರದ್ಧೆಯಿಂದ ಸೇವೆ ಸಲ್ಲಿಸುತ್ತೇನೆ ಎಂದು ಈ ಮೂಲಕ ಘೋಷಿಸುತ್ತೇನೆ. ನಿಮ್ಮ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದರು.

ವೇದಿಕೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೋದಂಡರಾಮ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಾಜು ಕೆ., ಬಂಟ್ವಾಳ ಭೂ ದಾಖಲೆಗಳ ಅಧೀಕ್ಷಕ ಮಹೇಶ್ ಕುಮಾರ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ನಿಸಾರ್ ಅಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಂಘದ ಗೌರವ ಸಲಹೆಗಾರ ಮೋಹನ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಸವಲಿಂಗೇಗೌಡ ಹೆಚ್.ಜೆ. ವಂದಿಸಿದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top