ಭೀಕರ ಅಪಘಾತ : 8 ಯಾತ್ರಿಕರು ಸ್ಥಳದಲ್ಲೇ ಸಾವು

ಯಾತ್ರಿಕರಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ

ಲಖನೌ: ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2.10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಮಕ್ಕಳು. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.





















































 
 

ಟ್ರಾಕ್ಟರ್ ಟ್ರಾಲಿಯಲ್ಲಿ 61 ಜನರು ಇದ್ದರು. ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗಾಗಿ ಪ್ರಯಾಣಿಸುತ್ತಿದ್ದರು. 10 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

error: Content is protected !!
Scroll to Top