ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ

ಭಾರಿ ಹಗ್ಗ ಜಗ್ಗಾಟದ ಬಳಿಕ ನಾಲ್ವರ ನಾಮನಿರ್ದೇಶನಕ್ಕೆ ಹೈಕಮಾಂಡ್‌ ಒಪ್ಪಿಗೆ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಹಲವು ತಿಂಗಳಿಂದ ಖಾಲಿ ಇದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್‌ ಒಪ್ಪಿಗೆ ನೀಡಿದೆ. ಈ ಹಿಂದೆ ಫೈನಲ್ ಆಗಿದ್ದ ನಾಲ್ವರ ನಾಮನಿರ್ದೇಶನ ಪಟ್ಟಿ ಬದಲಾಗಿದ್ದು, ಇಬ್ಬರನ್ನು ಕೈಬಿಟ್ಟು ಅಚ್ಚರಿಯ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಕರಾವಳಿಯ ದಿನೇಶ್‌ ಅಮೀನ್‌ ಮಟ್ಟು ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದೆ.

ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಜಕ್ಕಪ್ಪ ಮತ್ತು ಆರತಿ ಕೃಷ್ಣ ಹೈಕಮಾಂಡ್ ಕೋಟಾದಡಿಯಲ್ಲಿ ಆಯ್ಕೆಯಾಗಿದ್ದರೆ, ಸಿಎಂ ಕೋಟಾದಿಂದ ರಮೇಶ್ ಬಾಬು ಮತ್ತು ಪತ್ರಕರ್ತ ಶಿವಕುಮಾರ್ ಆಯ್ಕೆಯಾಗಿದ್ದಾರೆ.





















































 
 

ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ, ಮೈಸೂರು ಮೂಲದ ಶಿವಕುಮಾರ್ ಹಾಗೂ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮುಖಂಡ ಜಕ್ಕಪ್ಪ ಅವರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ನಾನಾ ಕ್ಷೇತ್ರಗಳ ಸಾಧಕರ ಕೋಟಾದಲ್ಲಿ ನಾಮನಿರ್ದೇಶನಕ್ಕೆ ಹಲವು ಮಂದಿ ಆಕಾಂಕ್ಷಿಗಳಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಮೂಲಕ ಸಂಭಾವ್ಯರ ಪಟ್ಟಿ ಪಡೆದುಕೊಂಡಿದ್ದ ಎಐಸಿಸಿ ವರಿಷ್ಠ ನಾಯಕರು ಈ ನಾಲ್ವರನ್ನು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ ಶಿವಕುಮಾರ್ ತಮ್ಮ ಆಪ್ತರ ಪರವಾಗಿ ಭಾರಿ ಲಾಬಿ ಮಾಡಿದ್ದರು. ರಮೇಶ್‌ ಬಾಬು, ಸಿಎಂ ಸಿದ್ದರಾಮಯ್ಯನವರ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು, ದಲಿತ ಮುಖಂಡ ಡಿ.ಜಿ. ಸಾಗರ್‌ ಹಾಗೂ ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ ಅವರ ಹೆಸರು ಈ ಹಿಂದೆ ಫೈನಲ್ ಮಾಡಲಾಗಿದ್ದ ಪಟ್ಟಿಯಲ್ಲಿ ಇತ್ತು. ಸಿದ್ದರಾಮಯ್ಯನವರ ತಮ್ಮ ಆಪ್ತ ದಿನೇಶ್‌ ಅಮೀನ್‌ ಮಟ್ಟು ಅವರನ್ನು ಆಯ್ಕೆ ಮಾಡಿದ್ದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿ.ಜಿ. ಸಾಗರ್‌ ಪರವಾಗಿ ನಿಂತಿದ್ದರು. ಆದ್ರೆ ದಿನೇಶ್ ಅಮೀನ್ ಮಟ್ಟು ಆಯ್ಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ದಿನೇಶ್ ಅಮೀನ್ ಮಟ್ಟು ಹಾಗೂ ಸಾಗರ್ ಅವರನ್ನು ಕೈಬಿಡಲಾಗಿದೆ.

error: Content is protected !!
Scroll to Top